ಸಿಲಿಕಾನ್‌ ಸಿಟಿಯಲ್ಲಿ ಮೋದಿ ಬೃಹತ್‌ ರೋಡ್‌ ಶೋ – ರೇಷ್ಮೆಯ ಮೈಸೂರು‌ ಪೇಟಾದಲ್ಲಿ ಕಂಗೊಳಿಸುತ್ತಿರುವ ಪಿಎಂ

ಬೆಂಗಳೂರು: ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಮತಶಿಕಾರಿ ನಡೆಸಲು ವಾರದ ಕೊನೆಯಲ್ಲಿ ಮೂರನೇ ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಂಗಳೂರಿನ ಸೋಮೇಶ್ವರ ಸಭಾಭವನದಿಂದ ರಸ್ತೆಯಿಂದ ಅದ್ಧೂರಿಯಾಗಿ ರೋಡ್ ಶೋ ಪ್ರಾರಂಭಗೊಂಡಿದೆ. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 26.5 ಕಿ.ಮೀ ನಡೆಸುತ್ತಿದ್ದಾರೆ.
ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್‌ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯುತ್ತಿದೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆಯುತ್ತಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸುತ್ತಿದ್ದಾರೆ. ರೇಷ್ಮೆಯ ಕೇಸರಿ ಮೈಸೂರು‌ ಪೇಟಾದಲ್ಲಿ ಕಂಗೊಳಿಸುತ್ತಿದ್ದಾರೆ. ಪಿಸಿ ಮೋಹನ್, ತೇಜಸ್ವಿ ಸೂರ್ಯ ಸಾಥ್‌ ನೀಡುತ್ತಿದ್ದಾರೆ.
ಮೋದಿ ರೋಡ್ ಶೋಗೆ ಕಲಾತಂಡಗಳು ಮೆರುಗು ತಂದುಕೊಟ್ಟಿದೆ. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮುಗಿಲು ಮುಟ್ಟಿದೆ. ಹೂಮಳೆ ಸುರಿಸಿ ಸಂಭ್ರಮಿಸಿದ್ದಾರೆ. ಮೋದಿ ಮೋದಿ ಜೈಕಾರ ಘೋಷಣೆ ಜೋರಾಗಿದೆ.

ಮೋದಿ ಸಂಚರಿಸುವ ರಸ್ತೆಗಳು: ಬ್ರಿಗೇಡ್ ಮಿಲೇನಿಯಂ ರೋಡ್, ಟಿಎಂಸಿ ಲೇಔಟ್, ಮಾರೇನಹಳ್ಳಿ ರೋಡ್, ಜೆಪಿನಗರ 5ನೇ ಹಂತ, ಜಯನಗರ ಮೆಟ್ರೋ ಸ್ಟೇಷನ್, ಜಯನಗರ ಟ್ರಾಫಿಕ್ ಪೊಲೀಸ್ ಸ್ಟೇಷನ್, ಆರ್.ವಿ ರೋಡ್, ಸೌತ್ ಎಂಡ್ ಸರ್ಕಲ್, ಆರ್ಮುಗಂ ಸರ್ಕಲ್, ಮಾಧವ ರಾವ್ ಸರ್ಕಲ್, ದೊಡ್ಡ ಗಣಪತಿ ಟೆಂಪಲ್ ಜಂಕ್ಷನ್, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್ ಸಿಗ್ನಲ್, ಟಿ.ಆರ್. ಮಿಲ್ ಜಂಕ್ಷನ್, ಶಿರ್ಸಿ ಸರ್ಕಲ್, ಬಿನ್ನಿಮಿಲ್ ಸರ್ಕಲ್, ಕುಷ್ಠರೋಗ ಆಸ್ಪತ್ರೆ, ಮಾಗಡಿ ರೋಡ್ ಟೋಲ್‍ಗೇಟ್.