ಬೆಂಗಳೂರು : ಕಾಂಗ್ರೆಸ್ ಸಂಸದೀಯ ಪಕ್ಷ ಮುಖ್ಯಸ್ಥೆ ಸೋನಿಯಾ ಗಾಂಧಿ ಇಂದು ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸೋನಿಯಾ ಗಾಂಧಿ ಕರ್ನಾಟಕದ ಸಾರ್ವಭೌಮತೆಯ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ. ಆದರೆ, ಬಿಜೆಪಿ ಹಾಗೂ ಹಲವು ನೆಟ್ಟಿಗರು ಸೋನಿಯಾ ಗಾಂಧಿ ಹೇಳಿಕೆಗೆ ಟೀಕೆ ಮಾಡಿದ್ದು, ಭಾರತ್ ಜೋಡೋ ಯಾತ್ರೆ ನಡೆಸಿದ್ದ ಕಾಂಗ್ರೆಸ್‌ಈಗ ಮತ್ತೆ ಭಾರತ ವಿಭಜಿಸಲು ಹೊರಟಿದೆಯಾ ಎಂದು ತಿರುಗೆಟು ನೀಡಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭಾಷಣದ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್, ಸಿಪಿಪಿ ನಾಯಕಿ ಸೋನಿಯಾ ಗಾಂಧಿ ಅವರು 6.5 ಕೋಟಿ ಕನ್ನಡಿಗರಿಗೆ ಗಟ್ಟಿ ಸಂದೇಶ ರವಾನಿಸಿದ್ದಾರೆ.
ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ ಎಂದು ಕಾಂಗ್ರೆಸ್ ಮೇ 6 ರಂದು ರಾತ್ರಿ ಟ್ವೀಟ್ ಮಾಡಿತ್ತು. ಕಾಂಗ್ರೆಸ್‌ನ ಈ ಟ್ವೀಟ್‌ಗೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿದ ತಮಿಳುನಾಡು ಬಿಜೆಪಿ ಮುಖ್ಯಸ್ಥ ಹಾಗೂ ಕರ್ನಾಟಕದ ಸಹ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಕೈ ಪಕ್ಷದ ವಿರುದ್ಧ ವ್ಯಂಗ್ಯವಾಡಿದ್ದಾರೆ. ‘’ನಿಷೇಧಿತ ಪಿಎಫ್‌ಐ ಜೊತೆ ಕೈಜೋಡಿಸಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಲಾಭಕ್ಕಾಗಿ ಎಸ್‌ಡಿಪಿಐಯಂತಹ ಪಕ್ಷಗಳೊಂದಿಗೆ ಕೈ ಜೋಡಿಸಿವೆ. ಉಗ್ರರಿಗೆ ಹಣ ನೀಡುವ ಸಂಬಂಧಕ್ಕಾಗಿ ಕೇಂದ್ರ ಏಜೆನ್ಸಿಗಳು ದಾಳಿ ನಡೆಸಿದ ಅಭ್ಯರ್ಥಿಯನ್ನು ಸಾರ್ವಭೌಮತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ದಯವಿಟ್ಟು ನಿಮ್ಮನ್ನು ನೀವೇ ಅಪಹಾಸ್ಯ ಮಾಡುವುದನ್ನು ನಿಲ್ಲಿಸಿ’’ ಎಂದು ಟ್ವೀಟ್ ಮಾಡಿದ್ದಾರೆ.