ಸಾಮಾನ್ಯ ನಾಗರಿಕನಂತೆ BMTC ಬಸ್‍ನಲ್ಲಿ ರಾಹುಲ್ ಗಾಂಧಿ ಸಂಚಾರ

ಬೆಂಗಳೂರು: ಕಾಂಗ್ರೇಸ್ ಮುಖಂಡ ರಾಹುಲ್ ಗಾಂಧಿ ಅವರು ಬೆಂಗಳೂರಿನ ಬಿಎಂಟಿಸಿ ಬಸ್‍ನಲ್ಲಿ ಸಾಮಾನ್ಯ ನಾಗರಿಕರಂತೆ ಸೋಮವಾರ ಸಂಚರಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ 2 ದಿನಗಳು ಬಾಕಿಯಿದೆ. ಇಂದು ಸಂಜೆ ಚುನಾವನಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ವಿವಿಧ ಪಕ್ಷದ ನಾಯಕರು ಗೆಲುವು ಸಾಧಿಸಲು ವಿವಿಧ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಸೋಮವಾರ ಬೆಳಗ್ಗೆ ರಾಹುಲ್ ಗಾಂಧಿ ಅವರು ಬಿಎಂಟಿಸಿ ಬಸ್‍ನಲ್ಲಿ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಿಂದ ರಾಮಮೂರ್ತಿ ನಗರ ಕಡೆ ಹೋಗುತ್ತಿದ್ದ ಬಸ್‌ನಲ್ಲಿ ರಾಹುಲ್ ಗಾಂಧಿ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುತ್ತಲೇ ಸಾರ್ವಜನಿಕರಂತೆ ಬಸ್‍ನಲ್ಲಿ ಪ್ರಯಾಣಿಸಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್‍ನಲ್ಲೇ ಪ್ರಯಾಣ ಬೆಳೆಸಿದ್ದಾರೆ.