ಲಿಮಾ: ದಕ್ಷಿಣ ಪೆರುವಿನ ಚಿನ್ನದ ಗಣಿಯಲ್ಲಿ ಬೆಂಕಿ ಅವಘಡ ಸಂಭವಿಸಿ, 27 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೆರುವಿಯನ್ ಅಧಿಕಾರಿಗಳು ವರದಿ ಮಾಡಿದ್ದಾರೆ.
ಬೆಂಕಿ ಅವಘಡದಲ್ಲಿ ಸಿಲುಕಿದ್ದ 175 ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಗಣಿಗಾರಿಕೆ ಕಂಪನಿ ತಿಳಿಸಿದೆ. ಗಣಿಯ ಒಂದು ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ.
ಘಟನೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಕುಟುಂಬಸ್ಥರು ಘಟನಾ ಸ್ಥಳಕ್ಕೆ ಧಾವಿಸಿ ಕಣ್ಣೀರಿಟ್ಟರು. ಮೃತಪಟ್ಟವರ ಪೈಕಿ ನನ್ನ ಪತಿಯೂ ಇದ್ದಾರೆ. ಗಣಿಯಲ್ಲಿ ಅಪಾಯಗಳಿವೆ ಎಂದು ಅವರು ಹೇಳುತ್ತಿದ್ದರು. ನಾವು ತುಂಬಾ ಚಿಂತಿತರಾಗಿದ್ದೇವೆ. ನನ್ನ ಪತಿ ಇಬ್ಬರು ಮಕ್ಕಳನ್ನು ಬಿಟ್ಟು ಹೋಗಿದ್ದಾರೆ ಎಂದು ಮಹಿಳೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.