ಅದಾ ಶರ್ಮಾ ಮುಖ್ಯಭೂಮಿಕೆಯ ‘ದಿ ಕೇರಳ ಸ್ಟೋರಿ’ ಸಿನಿಮಾ ಶುಕ್ರವಾರ ರಿಲೀಸ್ ಆಗಿದೆ. ಭರ್ಜರಿ ಪ್ರದರ್ಶನವನ್ನೂ ಕಾಣುತ್ತಿದೆ. ಆದರೆ, ತಮಿಳು ನಾಡಿನಲ್ಲಿ ಮಾತ್ರ ಈ ಸಿನಿಮಾ ರಿಲೀಸ್ ಆಗಿಲ್ಲ. ಕಾರಣ ದಿ ಕೇರಳ ಸ್ಟೋರಿಯನ್ನು ಪ್ರದರ್ಶನ ಮಾಡದಂತೆ ಅಲ್ಲಿನ ಚಿತ್ರಮಂದಿರದ ಮಾಲೀಕರು ನಿರ್ಧಾರ ಕೈಗೊಂಡಿದ್ದಾರೆ. ಸಿನಿಮಾ ಕುರಿತಂತೆ ಪ್ರತಿಭಟನೆ ಕಾವು ಹೆಚ್ಚಾಗಿದ್ದರಿಂದ ಇಂಥದ್ದೊಂದು ತೀರ್ಮಾನ ತಗೆದುಕೊಳ್ಳಲಾಗಿದೆ ಎಂದಿದ್ದಾರೆ ಚಿತ್ರ ಪ್ರದರ್ಶಕರು.
ಸಿನಿಮಾಗೆ ಮೊದಲ ದಿನ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಮೊದಲ ದಿನ ಚಿತ್ರಕ್ಕೆ ಬಾಕ್ಸ್ ಆಫೀಸಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಈ ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಂತೆಯೇ ಚಿತ್ರಕ್ಕೆ ಜೀವ ಬಂದಂತಾಗಿದೆ. ಹಲವರು ಚಿತ್ರದ ಬಗ್ಗೆ ಮತ್ತೆ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ.
ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.
ಈಗಾಗಲೇ ವಿವಾದಕ್ಕೆ ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿ