ಕಾರು ಟಿಟಿ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು, ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು(Kadur) ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು. ಇನ್ನು ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಆ ಕಡೆ ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದ್ದು, ಅದರ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.