ಸಿ.ಟಿ ರವಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಯವರನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ ನಡೆಸಲಾಯಿತು.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರಮಾಪ್ತ ಭೋಜೇಗೌಡ, ಜೆಡಿಎಸ್ ಅಭ್ಯರ್ಥಿ ಇದ್ದರೂ ಸಿ.ಟಿ ರವಿ ವಿರುದ್ಧ ಭೋಜೇಗೌಡ ಅಖಾಡಕ್ಕಿಳಿದಿದ್ದರು. ಈ ಮೂಲಕ ಸಿ.ಟಿ.ರವಿ ಸೋಲಿನ ಮಾಸ್ಟರ್ ಮೈಂಡ್ ಆಗಿದ್ದಾರೆ. ಹೀಗಾಗಿ ಜೆ.ಡಿ.ಎಸ್ ಕಾರ್ಯಕರ್ತರು ಭೋಜೇಗೌಡರಿಗೆ ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ಸನ್ಮಾನ ಹಾಗೂ ಅಭಿಷೇಕ ಮಾಡಿದ್ದಾರೆ. ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದ ಭೋಜೇಗೌಡ, ಜೆಡಿಎಸ್ ನಿಂದ ಗೆದ್ದು ಕಾಂಗ್ರೆಸ್ಸಿನ ತಮ್ಮಯ್ಯ ಪರ ಮತಯಾಚಿಸಿದ್ದರು.