ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಅಪಾರ ಹಾನಿಯುಂಟಾಗಿದ್ದು ಭಾನುವಾರ ಜಿಲ್ಲಾಧಿಕಾರಿ ಮುಲೈ ಮುಗಿಲನ್ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ, ಕುಮಟಾ ತಾಲೂಕಿನ ನೆರೆ ಪೀಡಿತ ಪ್ರದೇಶಗಳಾದ ಕಾನಳ್ಳಿ, ನವಿಲುಗೋಣ, ಸುಳೆಮುರ್ಖಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ ದುರಸ್ತಿ ಕಾರ್ಯಕ್ಕೆ ಚುರಕು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಲ್ಲಿಂದ ಕಾಳಜಿ ಕೇಂದ್ರಕ್ಕೆ ತೆರಳಿದ ಜಿಲ್ಲಾಧಿಕಾರಿಗಳು ವ್ಯವಸ್ಥೆ ಬಗ್ಗೆ ಪರೀಶೀಲಿಸಿದರು.
ಇನ್ನು ಜಿಲ್ಲೆಯಲ್ಲಿ ವರುಣನ ಅಬ್ಬರ ಕೊಂಚ ತಗ್ಗಿದ್ದು ಪ್ರವಾಹ ಪೀಡಿತ ಶರಾವತಿ, ಅಘನಾಶಿನಿ, ಗಂಗಾವಳಿ ಭಾಗದಲ್ಲಿ ನೆರೆಯ ಪ್ರಮಾಣ ಇಳಿಕೆಯಾಗಿದೆ.