ಭೋಪಾಲ್: ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೃತದೇಹವನ್ನು ಬೈಕಿನಲ್ಲೇ ಸಾಗಿಸಿದ ಘಟನೆಯೊಂದು ಮಧ್ಯಪ್ರದೇಶದ (Madhyapradesh) ಶಹದೋಲ್ ನಲ್ಲಿ ನಡೆದಿದೆ.
ವ್ಯಕ್ತಿಯನ್ನು ಲಕ್ಷ್ಮಣ್ ಸಿಂಗ್ ಎಂದು ಗುರುತಿಸಲಾಗಿದ್ದು, ಇವರು ಕೋಟಾ ಗ್ರಾಮದವರು. ಸಿಂಗ್ ಮಗಳು ಮಾಧುರಿ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾಳೆ. ಮಗಳು ಸಾವನ್ನಪ್ಪುತ್ತಿದ್ದಂತೆಯೇ ಸಿಂಗ್ ಸರ್ಕಾರಿ ಆಸ್ಪತ್ರೆಯ ಅಧಿಕಾರಿಗಳಲ್ಲಿ ಅಂಬುಲೆನ್ಸ್ ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದ್ದಾರೆ. ಈ ವೇಳೆ ಅಧಿಕಾರಿಗಳು 15 ಕಿ.ಮಿ ಒಳಗಡೆ ಮಾತ್ರ ಅಂಬುಲೆನ್ಸ್ (Ambulance) ಕೊಡುವುದಾಗಿ ತಿಳಿಸಿದ್ದಾರೆ. ಅಲ್ಲದೆ 15 ಕಿ.ಮೀ ಗಿಂತಲೂ ದೂರ ಕ್ರಮಿಸಬೇಕಾದರೆ ಹೆಚ್ಚಿನ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಮಗಳ ಶವವನ್ನು ಬೈಕಿನಲ್ಲಿಯೇ ಸಾಗಿಸುವ ಬಗ್ಗೆ ತೀರ್ಮಾನ ಮಾಡಿದ್ದಾರೆ.
ಶಹದೋಲ್ ಕಲೆಕ್ಟರ್ ವಂದನಾ ವೈದ್ಯ ಅವರು ಮಗಳ ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ವಾಹನದ ವ್ಯವಸ್ಥೆ ಮಾಡಿದರು. ಹೀಗಾಗಿ ಅಂತಿಮ ವಿಧಿ-ವಿಧಾನಗಳಿಗಾಗಿ ಮಗಳ ದೇಹವನ್ನು ಮನೆಗೆ ಕೊಂಡೊಯ್ಯಲು ಸಾಧ್ಯವಾಯಿತು ಎಂದು ಸಿಂಗ್ ತಿಳಿಸಿದರು. ಶಹದೋಲ್ ಕಲೆಕ್ಟರ್, ಸಿಂಗ್ ಕುಟುಂಬಕ್ಕೆ ಸ್ವಲ್ಪ ಆರ್ಥಿಕ ಸಹಾಯವನ್ನು ಮಾಡಿದರು. ಮತ್ತು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದರು.