ಜಲ್ಲಿಕಟ್ಟು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಎಂದ ಸುಪ್ರೀಂಕೋರ್ಟ್‌: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಗೆ ಕಾನೂನು ಮಾನ್ಯತೆ

ನವದೆಹಲಿ (ಮೇ 18, 2023): ಜಲ್ಲಿಕಟ್ಟುಗೆ ತಮಿಳುನಾಡು ಸರ್ಕಾರ ನೀಡಿರುವ ಕಾನೂನಿನ ಮಾನ್ಯತೆಯನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಜಲ್ಲಿಕಟ್ಟು ನಮ್ಮ ಸಂಸ್ಕೃತಿ ಪರಂಪರೆ ಎಂಬುದನ್ನೂ ದೇಶದ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದೆ.
ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಕೆ. ಎಂ. ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು, “ನಾವು ಶಾಸಕಾಂಗದ ದೃಷ್ಟಿಕೋನವನ್ನು ಅಡ್ಡಿಪಡಿಸುವುದಿಲ್ಲ ಮತ್ತು ಶಾಸಕಾಂಗವು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಭಾಗವಾಗಿದೆ ಎಂಬ ಅಭಿಪ್ರಾಯವನ್ನು ತೆಗೆದುಕೊಂಡಿದೆ. ಹಾಗೆ, ಮುನ್ನುಡಿಯಲ್ಲಿ ಇದನ್ನು ತಮಿಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಭಾಗವೆಂದು ಘೋಷಿಸಲಾಗಿದೆ ಎಂದೂ ತಿಳಿಸಿದ್ದಾರೆ.