ಸಿಎಂ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ: ವಿಪಕ್ಷ ನಾಯಕ ಯಾರು?

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ (Karnataka Chief minister) ಯಾರು ಎಂಬ ಬಗ್ಗೆ ಕಾಂಗ್ರೆಸ್ನಲ್ಲಿ ನಿರ್ಮಾಣವಾಗಿದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಹೈಕಮಾಂಡ್ ಆಯ್ಕೆ ಮಾಡಿ ಅಧಿಕೃತ ಘೋಷಣೆ ಮಾಡಿದೆ. ಇನ್ನು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ನಿಂದ ಸಿಎಂ ಆಯ್ಕೆ ಬೆನ್ನಲ್ಲೇ ಇದೀಗ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯಲ್ಲು ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ.

ಹೌದು…ಕಾಂಗ್ರೆಸ್ನಲ್ಲಿ ಸಿಎಂ ಆಯ್ಕೆ ಗೊಂದಲ ಪರಿಹಾರ ಆಗುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ(opposition leader )ಆಯ್ಕೆಗೆ ಮುಂದಾಗಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಂಗಾಮಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕನ ಆಯ್ಕೆ ಕುರಿತು ಶೀಘ್ರವೇ ಶಾಸಕಾಂಗ ಪಕ್ಷದ ಸಭೆ ಕರೆದು ಪ್ರಕ್ರಿಯೆ ನಡೆಸುತ್ತೇವೆ ಎಂದಿದ್ದಾರೆ.

ಸಿಎಂ ಆಯ್ಕೆ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರಕ್ಕೆ ಸಂಬಂಧಿದಂತೆ ಚರ್ಚೆಗಳು ಶುರುವಾಗಿವೆ. ಕಾಂಗ್ರೆಸ್ನಿಂದ ಸಿಎಂ ಆಯ್ಕೆಯಾಗಿದೆ. ಇನ್ನು ಬಿಜೆಪಿಯಿಂದ ವಿರೋಧ ಪಕ್ಷದ ನಾಯಕ ಯಾರು ಎನ್ನುವ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಳಿನ್ ಕುಮಾರ್ ಕಟೀಲ್, ಸಿಟಿ ರವಿ ನಾ ಅಂತೆಲ್ಲ ಟ್ರೋಲ್ ಮಾಡುತ್ತಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಯಲ್ಲಿ ಈಗ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದು, ಈ ನಡುವೆ ಪ್ರತಿಪಕ್ಷದ ನಾಯಕ ಆಯ್ಕೆಯಲ್ಲದರೂ ಚಾಣಕ್ಷತೆ ವಹಿಸಲು ಪಕ್ಷ ಮುಂದಾಗುತ್ತಿದೆ. ಸಾಮಾಜಿಲ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಕೆಲ ಹೆಸರುಗಳನ್ನು ಬರೆದುಕೊಂಡು ಇವರನ್ನೇ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಬಿವೈ ವಿಜಯೇಂದ್ರ ಸೇರಿದಂತೆ ಇನ್ನು ಕೆಲ ಹೆಸರುಗಳನ್ನು ತೇಲಿಬಿಟ್ಟಿದ್ದಾರೆ.
ಪ್ರಬಲ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಎದುರಿಸುವ ಪ್ರಬಲ ನಾಯಕನನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಬಿಜೆಪಿ ಚಿಂತನೆ ನಡೆಸಿದೆ. ಕಾನೂನು ಬದ್ಧವಾಗಿ ಮಾತಿನಲ್ಲೇ ಆಡಳಿತ ಪಕ್ಷವನ್ನು ಕಟ್ಟಿಹಾಕುವ ತಾಕತ್ತು ಜೆಸಿ ಮಾಧುಸ್ವಾಮಿ ಅವರಲ್ಲಿತ್ತು. ಆದ್ರೆಮ ಅವರು ಸೋತಿದ್ದರಿಂದ ಮೇಲ್ನೋಟಕ್ಕೆ ನೋಡಿದರೆ ಬಿಜೆಪಿಯಲ್ಲಿ ಒಳ್ಳೆ ಮಾತುಗಾರಿಕೆ, ಕಾನುನು ಬದ್ಧವಾಗಿ ಮಾತನಾಡುವ ನಾಯಕನ ಕೊರತೆ ಬಿಜೆಪಿಯಯಲ್ಲಿ ಎದ್ದು ಕಾಣಿಸುತ್ತಿದೆ. ಇರುವರಲ್ಲಿ ಸದ್ಯ ಬಸವರಾಜ ಬೊಮ್ಮಾಯಿ ಅವರೇ ಸೂಕ್ತ ಎನ್ನಿಸುತ್ತಿದೆ. ಹೀಗಾಗಿ ಬೊಮ್ಮಾಯಿ ಅವರೇ ವಿರೋಧ ಪಕ್ಷ ನಾಯಕನಾಗುವ ಸಾಧ್ಯತೆಗಳು ಹೆಚ್ಚಿವೆ.