ಮಧ್ಯಪ್ರದೇಶ: ಇಂಧೋರ್ ನಿಂದ ಪುಣೆಗೆ ತೆರಳುತ್ತಿದ್ದ ಮಹಾರಾಷ್ಟ್ರ ಸರ್ಕಾರಿ ಬಸ್ ಅಪಘಾತಕ್ಕೀಡಾಗಿ 12 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಖಾಲ್ಘಾಟ್ ಬಳಿ ನರ್ಮದಾ ನದಿಯ ಸೇತುವೆಯಿಂದ ಬಸ್ ಉರುಳಿ ಬಿದ್ದು ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ 12 ಜನ ಮೃತಪಟ್ಟಿದ್ದು ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರನ್ನ ರಕ್ಷಣೆ ಮಾಡಲಾಗಿದೆ ಎಂದು ಮಧ್ಯಪ್ರದೇಶ ಸರ್ಕಾರದ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು ಗಾಯಾಳುಗಳನ್ನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.