ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

ಕಳೆದ ನಾಲ್ಕೈದು ದಿನಗಳಿಂದ ಬಿಸಿಲಿನ ಝಳಕ್ಕೆ ಕಂಗೆಟ್ಟಿದ ಜನಕ್ಕೆ ತಂಪೆರೆಯಲು ವರುಣರಾಯ ಆಗಮಿಸಲಿದ್ದಾನೆ.ಮೇ 21 ಮತ್ತು 22ರಂದು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಸಹ ಕೆಲವೆಡೆ ಮಳೆಯಾಗಲಿದೆ
ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿಯೂ ಚದುರಿದ ರೀತಿಯಲ್ಲಿ ಮಳೆಯಾಗ್ತಿದೆ. ನಿನ್ನೆಯೂ ಯಶವಂತಪುರ ಸುತ್ತಲಿನ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ. ಮುಂದಿನ ಎರಡು ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆಗಳಿವೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಭಾಗದಲ್ಲಿಯೂ ಮಳೆ ಬೀಳುವ ನಿರೀಕ್ಷೆಗಳಿವೆಇನ್ನು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಂದು ವಾರದಿಂದ ತಾಪಮಾನ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ.


ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು ಭಾಗದಲ್ಲಿ ಗರಿಷ್ಠಿ 38 ರಿಂದ 40 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ದಾಖಲಾಗುತ್ತಿದೆ
ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆ ಆಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮಳೆಯಾಗುವ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂನ್ 4 ಅಥವಾ ನಾಲ್ಕು ದಿನ ತಡವಾಗಿ ಮುಂಗಾರು ಮಾರುತುಗಳು ಕೇರಳ ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಜೂನ್ 6ರ ನಂತರ ಮುಂಗಾರು ಮಳೆಯಾಗುವ ನಿರೀಕ್ಷೆಗಳಿವೆ. ಮುಂಗಾರು ಮಳ ಆರಂಭವಾಗುತ್ತಿದ್ದಂತೆ ದೇಶದಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಳ್ಳುತ್ತವೆ