ದಾಂಡೇಲಿಯಲ್ಲಿ ಶ್ರೀ.ಕ್ಷೇತ್ರ.ಧ.ಗ್ರಾ.ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ

ದಾಂಡೇಲಿ : ಶ್ರೀ.ಕ್ಷೇತ್ರ.ಧ.ಗ್ರಾ ಯೋಜನೆಯು ಸಂಸ್ಥೆಯ ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೆರವಾಗಲು ಪ್ರಾರಂಭಿಸಿರುವ ಸುಜ್ಞಾನ ನಿಧಿ ಶಿಷ್ಯವೇತನವನ್ನು ದಾಂಡೇಲಿ ನಗರದಲ್ಲಿರುವ ಶ್ರೀ.ಕ್ಷೇತ್ರ ಧ.ಗ್ರಾ ಯೋಜನೆಯ ಕಾರ್ಯಾಲಯದ ಸಭಾ ಭವನದಲ್ಲಿ ವಿತರಿಸಲಾಯ್ತು.

ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರದೀಪ್.ಜಿಯವರು ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನವನ್ನು ವಿತರಿಸಿ ಮಾತನಾಡುತ್ತಾ, ಸುಜ್ಞಾನ ನಿಧಿ ಶಿಷ್ಯವೇತನ ಕಾರ್ಯಕ್ರಮದಲ್ಲಿ ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣವನ್ನು ಪಡೆಯುವ ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ಮಾಸಿಕ 400/- ರೂ ನಿಂದ 1000/-ರೂ ವರೆಗೆ ಅವರ ವಿದ್ಯಾಭ್ಯಾಸ ಮುಗಿಯುವ ತನಕ ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯಿಂದ ಪ್ರತಿ ತಿಂಗಳು ವಿದ್ಯಾರ್ಥಿಗಳ ಉಳಿತಾಯ ಖಾತೆಗೆ ಜಮಾ ಮಾಡಲಾಗುತ್ತದೆ. ಇದು ವಿದ್ಯಾರ್ಥಿಗಳ ಶಿಕ್ಷಣದ ಉನ್ನತಿಗೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಶ್ರೀಕಾಂತ್ ನಾಯ್ಕ, ಹಾಗೂ ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೊದಲ ಹಂತದಲ್ಲಿ ದೇಶಪಾಂಡೆಯವರನ್ನು ಸಚಿವ ಸಂಪುಟಕ್ಕೆ ಸೇರಿಸಬೇಕಿತ್ತು- ವಿನಯ್ ದೇಸಾಯಿ

ದಾಂಡೇಲಿ : ರಾಜ್ಯದಲ್ಲೆ ಅತೀ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಆರ್.ವಿ.ದೇಶಪಾಂಡೆಯವರಿಗೆ ಅವರ ಹಿರಿತನ, ಅನುಭವವನ್ನು ಪರಿಗಣಿಸಿ, ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟಕ್ಕೆ ಮೊದಲ ಹಂತದಲ್ಲೆ ಸೇರ್ಪಡೆ ಮಾಡಬೇಕಿತ್ತು. ಆದರೆ ದೇಶಪಾಂಡೆಯವರನ್ನು ಮೊದಲ ಹಂತದಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡದಿರುವುದು ನಮಗೆಲ್ಲಾ ಅತ್ಯಂತ ನೋವು ತಂದಿದೆೆ ಎಂದು ಶನಿವಾರ ನಗರಕ್ಕೆ ಆಗಮಿಸಿದ್ದ ಜೋಯಿಡಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿನಯ್ ದೇಸಾಯಿಯವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಾಗೆ ನೋಡಿದರೇ ಆರ್.ವಿ.ದೇಶಪಾಂಡೆಯವರಿಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳಿವೆ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ ಶ್ರೇಯಸ್ಸು ದೇಶಪಾಂಡೆಯವರಿಗಿದೆ. ದೇಶಪಾಂಡೆಯವರ ರಾಜಕೀಯ ಅನುಭವ, ಪಾರದರ್ಶಕ ಆಡಳಿತ, ಹಿರಿತನವನ್ನು ಪರಿಗಣಿಸಿ ಅವರನ್ನು ಸಚಿವ ಸಂಪುಟಕ್ಕೆ ಮೊದಲ ಹಂತದಲ್ಲಿ ತೆಗೆದುಕೊಳ್ಳಬೇಕಿತ್ತು. ಅವರನ್ನು ಮೊದಲ ಹಂತದಲ್ಲಿ ಸಚಿವ…
ಮಂಕಾಳ್ ವೈದ್ಯರಿಗಗೆ ಮೀನುಗಾರಿಕೆ ಮತ್ತು ಬಂದರು ಸಚಿವ ಸ್ಥಾನ ನೀಡಬೇಕು ಎಂದು ಮೀನುಗಾರ ಮುಖಂಡರು ಆಗ್ರಹ

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಒಂದೂ ಲಕ್ಷಕ್ಕೂ ಅಧಿಕ ದಾಖಲೆ ಮತಗಳನ್ನು ಪಡೆದು ಆಯ್ಕೆಯಾದ ಶಾಸಕ ಮಂಕಾಳ ವೈದ್ಯ ಅವರಿಗೆ ಮೀನುಗಾರಿಕೆ ಮತ್ತು ಬಂದರು ಸಚಿವ ಸ್ಥಾನ ನೀಡಬೇಕು ಎಂದು ಮೀನುಗಾರ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು  ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮೊಗೇರ ಸಮಾಜದ ಅಧ್ಯಕ್ಷ ಹಾಗೂ ಮೀನುಗಾರರ ಮುಖಂಡ ಅಣ್ಣಪ್ಪ ಮೊಗೇರ, ಶಾಸಕ ಮಂಕಾಳ ವೈದ್ಯರಿಗೆ ಕರಾವಳಿ ಪ್ರದೇಶದ ಮತ್ತು ಮೀನುಗಾರರ ಸಮಸ್ಯೆ ಕುರಿತು ಸಂಪೂರ್ಣ ಅರಿವಿದೆ. ಸ್ವತಹ ಅವರೂ ಕೂಡ ಮೀನುಗಾರ ಕುಟುಂಬದಿಂದಲೇ ಬಂದಿರುವುದರಿಂದ ಮೀನುಗಾರಿಕೆಯನ್ನು ಅಭಿವೃದ್ಧಿ ಪಡಿಸಲು ಬೇಕಾದ ಯೋಜನೆ ರೂಪಿಸಲು ಅವರು ಸಮರ್ಥರಿದ್ದಾರೆ. ಸರಕಾರದ ಮತ್ತು ಬಂದರು ಮೀನುಗಾರಿಕಾ ಸಚಿವ ಸ್ಥಾನವನ್ನು ಮೀನುಗಾರಿಕೆ ಬಗ್ಗೆ ಅರಿವಿಲ್ಲದವರಿಗೆ ಕೊಟ್ಟರೆ ಮೀನುಗಾರರಿಗೆ ಯಾವ…