ಹಳಿಯಾಳ : ರಾಜ್ಯ ವಿಧಾನ ಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಜ್ಯದ ಹಿರಿಯ ಶಾಸಕರು ಹಾಗೂ ಹಳಿಯಾಳ, ದಾಂಡೇಲಿ, ಜೋಯಿಡಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರನ್ನು ಆಯ್ಕೆ ಮಾಡಲಾಗಿದೆ.
ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸೋಮವಾರದಿಂದ ಮೂರು ದಿನಗಳವರೆಗೆ ವಿಧಾನ ಸಭೆ ಅಧಿವೇಶನ ನಡೆಯಲಿದ್ದು, ಈ ವೇಳೆ ನೂತನವಾಗಿ ಆಯ್ಕೆಯಾದ 224 ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕರಾದ ಆರ್.ವಿ.ದೇಶಪಾಂಡೆಯವರು ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ ಎಂದು ತಿಳಿದು ಬಂದಿದೆ.