ಬೆಂಗಳೂರು: ಮುಂಗಾರು ಆರಂಭಕ್ಕೆ ಇನ್ನೂ ಕೆಲವು ದಿನಗಳು ಬಾಕಿಯಿವೆ. ಆದ್ರೆ, ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ, ನಿನ್ನೆ(ಭಾನುವಾರ) ಸುರಿದ ಮಳೆ ಮಹಾನಗರ ಬೆಂಗಳೂರಿಗೆ ನರಕವನ್ನೇ ತೋರಿಸಿದ್ದಾನೆ. ಅಲ್ಲದೇ ಮಹಿಳಾ ಟೆಕ್ಕಿಯನ್ನು ಬಲಿ ಪಡೆದುಕೊಂಡಿದೆ. ದುರ್ಘಟನೆ ಬೆನ್ನಲ್ಲೇ ನಿನ್ನೆಯ ಮಹಾಮಳೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಯುವಕನೋರ್ವ ರಾಜಕಾಲುವೆಯಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ. ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಲೋಕೇಶ್(31) ಮೃತದೇಹ ಇಂದು(ಮೇ 22) ಬ್ಯಾಟರಾಯನಪುರದ ರಾಜಕಾಲುವೆ ಬಳಿ ಪತ್ತೆಯಾಗಿದೆ.