ವಿಧಾನಸಭೆ ಹಂಗಾಮಿ ಸ್ಪೀಕರ್ ಆಗಿ ಆರ್.ವಿ. ದೇಶಪಾಂಡೆ ನೇಮಕ

ಬೆಂಗಳೂರು: ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್​ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದೆ. ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮೊದಲ ಹಂತದಲ್ಲಿ 8 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ನೂತನ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಮೂರು ದಿನ (ಮೇ.22-24) ನಡೆಯಲಿದೆ. ಈ ಅಧಿವೇಶನದಲ್ಲಿ ಮೊದಲ ಎರಡು ದಿನ ಶಾಸಕರು ಪ್ರಮಾಣ ವಚನ ಸ್ವೀರಿಸಲಿದ್ದು, ಹಂಗಾಮಿ ಸಭಾಪತಿ ಆರ್​​​.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ.