ಚಿತ್ರದುರ್ಗ ಮುರುಘಾಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕ ರದ್ದು ಪಡಿಸಿದ ಹೈಕೋರ್ಟ್

ಬೆಂಗಳೂರು: ಚಿತ್ರದುರ್ಗದ ಮುರುಘಾಮಠಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ಆಡಳಿತಾಧಿಕಾರಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಸರ್ಕಾರಕ್ಕೆ ಮಠದ ಆಡಳಿತಾಧಿಕಾರಿ ನೇಮಿಸುವ ಅಧಿಕಾರವಿಲ್ಲವೆಂದು ಹೇಳಿ ಹೈಕೋರ್ಟ್ ಇಂದು(ಮೇ 22)​ ತೀರ್ಪು ನೀಡಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಭಕ್ತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ಡಿಸೆಂಬರ್ 13 ರಂದು ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನ ಮುರುಘಾಮಠದ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಮಠದ ಲೆಕ್ಕಪತ್ರ ನಿರ್ವಹಣೆ, ಮಠದ ಚರ ಸ್ಥಿರಾಸ್ತಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿ ನೇಮಿಸಲಾಗಿದೆ. ವಸ್ತ್ರದ್ ಅವರು ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಈ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಭಕ್ತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು. ಹೀಗಾಗಿ ಪಿಎಸ್ ವಸ್ತ್ರದ್ ಅವರನ್ನು ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಅವರು ಇಂದು ಆದೇಶ ಹೊರಡಿಸಿದ್ದರು.

ಮಠದ ಲೆಕ್ಕಪತ್ರ ನಿರ್ವಹಣೆ, ಮಠದ ಚರ ಸ್ಥಿರಾಸ್ತಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿ ನೇಮಿಸಲಾಗಿದ್ದು, ವಸ್ತ್ರದ್ ಅವರು ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಆದೇಶದಲ್ಲಿ ತಿಳಿಸಿತ್ತು. ಆದ್ರೆ, ಇದಕ್ಕೆ ಕೆಲವರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಈ ಬಗ್ಗೆ ಡಿ.ಎಸ್.ಮಲ್ಲಿಕಾರ್ಜುನ ಸೇರಿದಂತೆ ಹಲವರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಕಳೆದ ಹಲವು ತಿಂಗಳಿಂದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಇಂದು (ಮೇ 22) ಅಂತಿಮವಾಗಿ ಸರ್ಕಾರದ ಆಡಳಿತಾಧಿಕಾರಿ ನೇಮಕವನ್ನು ರದ್ದುಗೊಳಿಸಿ ತೀರ್ಪು ನೀಡಿದೆ.