ಮುಂದಿನ 4 ದಿನ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಯಗಟಿ, ಸುಳ್ಯ, ದಾವಣಗೆರೆ, ಸುಬ್ರಹ್ಮಣ್ಯ, ಕಡೂರು, ಕೊಣನೂರು, ಪುತ್ತೂರು, ಗಂಗಾವತಿ, ಮುಧೋಳ, ಅಡಕಿ, ಹಿರೆಕೆರೂರು, ಕಂಪ್ಲಿ, ಬೆಂಗಳೂರು ನಗರ, ಭಾಗಮಂಡಲ, ಕೊಟ್ಟಿಗೆಹಾರ, ರಾಣೆಬೆನ್ನೂರು, ಕಳಸ, ಬೆಳ್ತಂಗಡಿ, ನಾಪೋಕ್ಲು, ಹಾರಂಗಿ, ಪಣಂಬೂರು, ಅಕ್ಕಿ ಆಲೂರು, ಗದಗ, ಚಿತ್ತಾಪುರ, ಮೂರ್ನಾಡು, ಅರಕಲಗೂಡು, ಚಿಂತಾಮಣಿ, ಶಿವಮೊಗ್ಗ, ಉತ್ತರಹಳ್ಳಿ, ಹೊನ್ನಾಳಿ, ಸಿರುಗುಪ್ಪ, ತಿಪಟೂರು, ಬಂಡೀಪುರದಲ್ಲಿ ಮಳೆಯಾಗಿದೆ.
ಎಷ್ಟು ದಿನ ಮಳೆ ಮುನ್ಸೂಚನೆ? ಮೇ 27ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.