ನವದೆಹಲಿ: ಉಪರಾಷ್ಟಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧಂಕರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.
ಉಪರಾಷ್ಟ್ರಪತಿ ಚುನಾವಣೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರ ಹೆಸರನ್ನು ಬಿಜೆಪಿ ಶನಿವಾರ ಘೋಷಿಸಿತ್ತು. ಧಂಕರ್ ಅವರು 2019 ರಿಂದ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆಸಲ್ಲಿಸಿದ್ದರು. ಇನ್ನು ಪ್ರತಿಪಕ್ಷದ ಅಭ್ಯರ್ಥಿಯಾಗಿ ಹಿರಿಯ ಕಾಂಗ್ರೆಸ್ ನಾಯಕಿ ಕರ್ನಾಟಕ ಮೂಲದ ಮಾರ್ಗರೆಟ್ ಆಳ್ವಾ ಕಣದಲ್ಲಿದ್ದಾರೆ.