ಯಲ್ಲಾಪುರ: ಪಟ್ಟಣದ ವಿವಿಧೆಡೆ ಅನಧಿಕೃತವಾಗಿ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ತಾಲೂಕು ತಂಬಾಕು ತನಿಖಾ ದಳದವರು ದಾಳಿ ನಡೆಸಿ, ದಂಡ ವಿಧಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಧೂಮಪಾನಕ್ಕೆ ಅವಕಾಶ, ತಂಬಾಕು ಉತ್ಪನ್ನಗಳ ಪರೋಕ್ಷ ಜಾಹೀರಾತು, ಬೀಡಿ, ಸಿಗರೆಟ್ ಮಾರಾಟ ಸೇರಿದಂತೆ ಒಟ್ಟು 11 ಪ್ರಕರಣಗಳನ್ನು ದಾಖಲಿಸಿ, 3550 ರೂ ದಂಡ ವಿಧಿಸಲಾಯಿತು.
ತಹಸೀಲ್ದಾರ ಎಂ.ಗುರುರಾಜ, ತಾ.ಪಂ ಇಒ ಜಗದೀಶ ಕಮ್ಮಾರ, ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ, ಎಎಸ್ಐ ಮಂಜುನಾಥ ಮನ್ನಂಗಿ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ಟ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ, ಆರೋಗ್ಯ ನಿರೀಕ್ಷಕ ಗುರು ಗಡಗಿ, ಶಿವಕುಮಾರ ರಾಜೂರ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.