ಬೆಂಗಳೂರು: ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ (Congress guarantee) ಬಗ್ಗೆ ಈಗ ಎಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ. ಬಿಜೆಪಿ ನಾಯಕರು ಗ್ಯಾರಂಟಿಗಳ ಕುರಿತಾಗಿ ಟೀಕೆಗಳನ್ನು ಸಹ ಮಾಡುತ್ತಿದ್ದಾರೆ. ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳಿಂದ ರಾಜ್ಯದ ವಾತಾವರಣವನ್ನು ಹಾಳುಮಾಡುತ್ತಿದೆ ಎಂದು ಕಿಡಕಾರಿದ್ದು, ಸದ್ಯ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ. ನಾವು ಘೋಷಿಸಿದ 5 ಗ್ಯಾರಂಟಿ ಜಾರಿಗೊಳಿಸುವುದು ನಿಶ್ಚಿತ ಎಂದು ಹೇಳುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರಿಗೆ ಕರ್ನಾಟಕದ ಜನ ತಪರಾಕಿ ನೀಡಿದ್ದಾರೆ. ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲಿ. ಹಾಗೆಯೇ ವಿಪಕ್ಷ ನಾಯಕನ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಹುಡುಕಿಕೊಳ್ಳಲಿ ಎಂದು ಟ್ವೀಟ್ ಮೂಲಕ ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ನೀಡಿದೆ.