ಸಿದ್ದಾಪುರ : ಪಟ್ಟಣ ಪಂಚಾಯತ್ ನಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಾಕಷ್ಟು ಹಣವಿದೆ ಎಂದಾದರೆ ಟ್ಯಾಂಕರ್ ಹೆಚ್ಚು ಮಾಡಿ ಎಲ್ಲರಿಗೂ ಪ್ರತಿದಿನ ನೀರು ಪೂರೈಕೆ ಮಾಡಿ ಗ್ರಾಮೀಣ ಭಾಗಗಳಲ್ಲೂ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಶಾಸಕ ಭೀಮಣ್ಣ ನಾಯ್ಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು ಅವರು ಆಡಳಿತ ಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು
ಮಳೆಗಾಲದ ಮುನ್ನ ಕೈಗೊಳ್ಳಬೇಕಾದ ಕ್ರಮವನ್ನು ಕೈಗೊಂಡು ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ
ಎಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿಕೊಂಡು ಅವರ ಕೆಲಸವನ್ನು ಸಂತೋಷದಿಂದ ಮಾಡಿಕೊಡಬೇಕು . ಸಾರ್ವಜನಿಕರ ಸಹಕಾರದೊಂದಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತಂದು ತಾಲೂಕಿನ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ದುಡಿಯಬೇಕು
ರೈತರಿಗೆ ಬೆಳೆ ಪರಿಹಾರ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಪಂಗಳಲ್ಲಿ ಇರುವ ಮಳೆಮಾಪನಾವನ್ನು ಸರಿಯಾಗಿ ವ್ಯವಸ್ಥೆಯಲ್ಲಿ ಇಟ್ಟುಕೊಳ್ಳುವಂತೆ ತಿಳಿಸಿದರು ಮಳೆಮಾಪನ ಸರಿ ಇಲ್ಲದೆ ಇದ್ದಲ್ಲಿ ಬೀಳುವ ಮಳೆಯ ಲೆಕ್ಕ ಸಿಗದೆ ಪರಿಹಾರ ಪಡೆಯಲು ತೊಂದರೆಯಾಗುತ್ತದೆ. ಹಾಸ್ಟೆಲ್ ಸೌಲಭ್ಯ ಪಡೆಯಲು ಅಡ್ಮೀಷನ್ ಪಡೆಯಲು ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು