ಜೋಯಿಡಾ : ಜೋಯಿಡಾ ತಾಲ್ಲೂಕು ಕೇಂದ್ರದ ವ್ಯಾಪ್ತಿಯಲ್ಲಿ ಶಾಲಾ/ಕಾಲೇಜುಗಳು ಮತ್ತು ಮಾರುಕಟ್ಟೆ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು, ಗುಟ್ಕಾ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ತಹಶೀಲ್ದಾರ್ ಜುಬೀನ್ ಮೊಹಪತ್ರ ಮತ್ತು ವಿವಿಧ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ದಾಳಿ ನಡೆಸಿದೆ.
ಜೋಯಿಡಾ ತಾಲ್ಲೂಕು ಕೇಂದ್ರ ವ್ಯಾಪ್ತಿಯಲ್ಲಿ ಒಟ್ಟು 15 ಅಂಗಡಿಗಳಿಗೆ ದಾಳಿ ನಡೆಸಲಾಗಿದ್ದು, ಗುಟ್ಕಾ, ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಂಡ ವಿಧಿಸಿ, ಗುಟ್ಕಾ, ತಂಬಾಕು ಪ್ಯಾಕೇಟ್ ಗಳನ್ನು ವಶಪಡಿಸಿಕೊಳ್ಳಲಾಯ್ತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗ್ರೇಡ್ :02 ರಾಜೇಶ್ ಚೌವ್ಹಾಣ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಸುಜಾತಾ, ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಶೇಖ, ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿ, ಪಿಎಸೈ ಕಸ್ತೂರಿ ಕುಕುನೂರ್ ಹಾಗೂ ಪೊಲೀಸ್ ಸಿಬ್ಬಂದಿಗಳು, ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.