ಹಳಿಯಾಳ : ಪಟ್ಟಣದ ವಿವಿದೆಡೆ ಶಾಲಾ/ಕಾಲೇಜುಗಳು ಮತ್ತು ಮಾರುಕಟ್ಟೆ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು, ಗುಟ್ಕಾ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ತಹಶೀಲ್ದಾರ್ ಎಸ್.ವಿ.ಲೋಕೇಶ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ ಮತ್ತು ತಾ.ಪಂ ಕಾರ್ಯಯನಿರ್ವಹಣಾಧಿಕಾರಿ ಪರಶುರಾಮ ಗಸ್ತೆಯವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳು ಹಾಗೂ ಪೊಲೀಸ್ನಿರ್ವಾಹಣಾಧಿಕಾರಿ ತಂಡ ದಾಳಿ ನಡೆಸಿ, ಮುನ್ನೆಚ್ಚರಿಕೆಯನ್ನು ನೀಡಿ ಜಾಗೃತಿಯನ್ನು ಮೂಡಿಸಿದೆ.
ಹಳಿಯಾಳ ಪಟ್ಟಣದ ಒಟ್ಟು 13 ಅಂಗಡಿಗಳಿಗೆ ದಾಳಿ ನಡೆಸಲಾಗಿದ್ದು, ಗುಟ್ಕಾ, ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಂಡ ವಿಧಿಸಿ, ಗುಟ್ಕಾ, ತಂಬಾಕು ಪ್ಯಾಕೇಟ್ ಗಳನ್ನು ವಶಪಡಿಸಿಕೊಳ್ಳಲಾಯ್ತು.
ದಾಳಿಯಲ್ಲಿ ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳು, ತಾಲ್ಲೂಕು ಆಸ್ಪತ್ರೆಯ ಸಿಬ್ಬಂದಿಗಳು, ತಾಲ್ಲೂಕು ಪಂಚಾಯ್ತು ಕಚೇರಿಯ ಸಿಬ್ಬಂದಿಗಳು ಮತ್ತು ಪೊಲಿಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.