ದಾಂಡೇಲಿ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ವತಿಯಿಂದ ಸಂಸ್ಥೆಯ ವಿವಿಧ ಸ್ವಸಹಾಯ ಸಂಘಗಳಿಗೆ ಸ್ವಸಹಾಯ ಸಂಘಗಳ ಪರಿಲ್ಪನೆ ಮತ್ತು ಬ್ಯಾಂಕ್ ಅರಿವು ಮಾಹಿತಿ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಯ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಯೋಜನಾ ಸಂಯೋಜಕರಾದ ವಿನಾಯಕ್ ಚೌವ್ಹಾಣ್ ಅವರು ಸ್ವಸಹಾಯ ಸಂಘಗಳ ಉದ್ದೇಶ ಮತ್ತು ಸಂಘವನ್ನು ನಡೆಸುವ ರೀತಿ, ಆರ್ಥಿಕ ವ್ಯವಹಾರಗಳ ಬಗ್ಗೆ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದರ ಬಗ್ಗೆ ವಿವರವಾಗಿ ಮಾಹಿತಿ ನೀಡಿ, ಸ್ವಸಹಾಯ ಸಂಘಗಳ ಮೂಲಕ ಸ್ವಾವಲಂಬಿ ಚಟುವಟಿಕೆಗಳ ಕಡೆಗೆ ಹೆಚ್ಚಿನ ಆಧ್ಯತೆ ನೀಡಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪ್ರಮುಖರುಗಳಾದ ಜೆನ್ನಾ ಬಾಯಿ, ಮಹಾದೇವಿ ಪಾಟೀಲ್ ಮೊದಲಾದವರು ಭಾಗವಹಿಸಿದ್ದರು.
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಕ್ಷೇತ್ರ ಮೇಲ್ವಿಚಾರಕರಾದ ಅಂದಾನಪ್ಪ ಅಂಗಡಿಯವರು ಸ್ವಾಗತಿಸಿ, ವಂದಿಸಿದರು. ತರಬೇತಿ ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.