ಹೈದರಾಬಾದ್ನ ಅಪಾರ್ಟ್ಮೆಂಟ್ವೊಂದರ ಪಾರ್ಕಿಂಗ್ಲಾಟ್ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು ತನ್ನ ಎರಡು ವರ್ಷದ ಮಗಳನ್ನು ಪಾರ್ಕಿಂಗ್ ಸ್ಥಳದಲ್ಲಿ ಮಲಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯನ್ನು ಗಮನಿಸದೆ ಕಾರನ್ನು ಚಲಾಯಿಸಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾರು ಅಬಕಾರಿ ಸಬ್‌ಇನ್‌ಸ್ಪೆಕ್ಟರ್‌ಗೆ ಸೇರಿದ್ದು, ಆಕೆಯ ಪತಿ ಕಾರು ಚಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.