ಕಾಂಗ್ರೆಸ್ ಶಾಸಕನ ಬೆಂಬಲಿಗರಿಂದ ಗೂಂಡಾಗಿರಿ; ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ

ರಾಮನಗರ: ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ (Magadi Assembly Constituency) ಕಾಂಗ್ರೆಸ್ (Congress) ಶಾಸಕ ಬಾಲಕೃಷ್ಣ (Balakrishna) ಬೆಂಬಲಿಗರು ಜೆಡಿಎಸ್ (JDS) ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಪ್ರವೀಣ್, ನವೀನ್, ವಸಂತ, ಕಿರಣ್, ಶರತ್, ರವಿಕಿರಣ್ ಸೇರಿದಂತೆ 20ಕ್ಕೂ ಹೆಚ್ಚು ಬೆಂಬಲಿಗರು ಚುನಾವಣೆ ದ್ವೇಷದ ಹಿನ್ನೆಲೆ ಜೆಡಿಎಸ್ನ ಅಚ್ಯುತ್, ಹನುಮಂತರಾಜು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆಕೋರರನ್ನು ಬಂಧಿಸುವಂತೆ ಜೆಡಿಎಸ್ ಮುಖಂಡರು ಒತ್ತಾಯಿಸಿದ್ದಾರೆ. ಗಾಯಾಳುಗಳಿಗೆ ಮಾಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಜಿ ಶಾಸಕ ಮಂಜುನಾಥ್ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಮುಸ್ಲಿಂ ಯುವತಿ ಜೊತೆ ಸ್ನೇಹ, ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ಚಿಕ್ಕಬಳ್ಳಾಪುರ: ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟ ದಿನದಿಂದ ಇದು ಎರಡನೇ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಬಿಜೆಪಿ, ಭಜರಂಗದಳದ ಹಿಂದೂ ಕಾರ್ಯಕರ್ತ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಹಿನ್ನೆಲೆ 30 ಜನ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ.
ಯುವತಿಯ ಜೊತೆ ರಸ್ತೆಯಲ್ಲಿ ಹೋಗುವಾಗ 30 ಯುವಕರ ಗುಂಪು ಹಿಂದೂ ಕರ್ಯಕರ್ತನ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅಜಿತ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಬಗ್ಗೆ ಅನ್ಯಕೋಮಿನ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್
ಪ್ರಕರಣಕ್ಕೆ ಸಂಬಂಧಿಸಿದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದ್ದು, ಯುವತಿಯ ಮನೆಯಲ್ಲೇ ಅಜಿತ್ ಸಿಕ್ಕಿಬಿದ್ದಿದ್ದ. ಯುವತಿಯ ಮನೆಯ ಕಬೋರ್ಡ್ನಲ್ಲಿ ಅವಿತು ಕುಳಿತಿದ್ದ ಎಂಬ ವಿಚಾರ ಬಯಲಾಗಿದೆ.ಅಜಿತ್ ಕಬೋರ್ಡ್ನಲ್ಲಿ ಅವಿತು ಕುಳಿತಿರುವುದು ಎನ್ನಲಾದ ವಿಡಿಯೋ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.