ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಆವರಣದಲ್ಲಿರುವ ಶ್ರೀ.ನಾಗದೇವತಾ ದೇವಸ್ಥಾನದಲ್ಲಿ ಭ್ರಮ, ಸಡಗರದಿಂದ 37 ನೇ ವರ್ಷದ ವಾರ್ಷಿಕ ವರ್ಧಂತಿ ಉತ್ಸವವು ಸಂಪನ್ನಗೊಂಡಿತು.
ನಾಗದೇವರಿಗೆ ವಿಶೇಷ ಪೂಜೆ, ಹೋಮ, ಹವನ ಇನ್ನಿತರ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಪೂಜಾ ಕಾರ್ಯಕ್ರಮದಲ್ಲಿ ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಜೈನ್, ಕಾಗದ ಕಾರ್ಖಾನೆಯ ಅಧಿಕಾರಿಗಳಾದ ರವಿ ಗೌತಮ್, ದಿನೇಶ್ ರಾವ್, ರಾಜೇಶ್ ತಿವಾರಿ, ನಗರ ಸಭಾ ಸದಸ್ಯ ಮೋಹನ ಹಲವಾಯಿ ಸೇರಿದಂತೆ ಕಾಗಗ ಕಾರ್ಖಾನೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.