ಕುಮಟಾ: ವಿಧಾತ್ರಿ ಅಕಾಡೆಮಿ ಸಹಭಾಗಿತ್ವ ಕೊಂಕಣ ಎಜುಕೇಶನ್ ಟ್ರಸ್ಟ್ನ ಬಿ.ಕೆ. ಭಂಡಾರಿಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ರಾಹುಲ್ ಯು. ಶಾನಬಾಗ್ ಆರ್ಕಿಟೆಕ್ಚೆರ್ ಇಂಜನಿಯರಿಣಗ್ ಕಾಲೇಜುಗಳ ಪ್ರವೇಶಾಯತಿಗಾಗಿ ರಾಷ್ಟ್ರಮಟ್ಟದಲ್ಲಿ ನೆಡೆಸುವ ಜೆಇಇ ಪೇಪರ್-2ರಲ್ಲಿ ಉತ್ತಮ ಅಂಕ ಗಳಿಸಿ, ರಾಷ್ಟ್ರಮಟ್ಟದಲ್ಲಿ 776ನೇ ರ್ಯಾಂಕ್ ಗಳಿಸುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿಯವರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಹಾಗೂ ಉಪನ್ಯಾಸ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.