ಜೋಯಿಡಾ ತಾಲ್ಲೂಕಿನ ಹಲವೆಡೆ ಭರದಿಂದ ಸಾಗುತ್ತಿರುವ ಹೊಸ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ

ಜೋಯಿಡಾ : ಜೋಯಿಡಾ ತಾಲ್ಲೂಕಿನ ಹಲವೆಡೆಗಳಲ್ಲಿ ಹಳೆ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸುವ ಕಾರ್ಯವು ಪ್ರಗತಿಯಲ್ಲಿದೆ. ಹಳೆಯದಾದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದ ಪುರುಷೋತ್ತಮ ಮಲ್ಯ ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ ಅವರ ಮಾರ್ದರ್ಶನದಲ್ಲಿ ಜೋಯಿಡಾ ತಾಲ್ಲೂಕಿನ ಹೆಸ್ಕಾಂ ಶಾಖಾಧಿಕಾರಿ ಜೋಸೆಫ್ ಫೆರ್ನಾಂಡೀಸ್ ಅವರ ನೇತೃತ್ವದಡಿ ಹೆಸ್ಕಾಂ ಪವರ್ ಮ್ಯಾನ್ ಗಳು ಮತ್ತು ಗುತ್ತಿಗೆ ಸಿಬ್ಬಂದಿಗಳು ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.