ಭಟ್ಕಳ್ : ರಾಜ್ಯದ ವಿವಿಧ ವಿಶ್ವಿವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ ಬೌದ್ದಿಕ ಆಸ್ತಿ ಹಕ್ಕುಗಳ ಮತ್ತು ವಾಣಿಜ್ಯೋದ್ಯಮ ಅಭಿವೃದ್ದಿ ಕಾರ್ಯಾಗಾರವನ್ನು ಜುಲೈ 11ರಿಂದ 17ರವರೆಗ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾಮಂಡಳಿ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ಆಸಕ್ತ ಪ್ರತಿನಿಧಿಗಳು ಜುಲೈ 5ರೊಳಗಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ- 080-29721550 ಅಥವಾ ಅಕಾಡೆಮಿಯ ವೆಬ್‌ಸೈಟ್ www.kstacademy.in ಗೆ ಸಂಪರ್ಕಿಸಲು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಕಟನೆಯಲ್ಲಿ ತಿಳಿಸಿದೆ..