ನರೇಗಾ ಕಾರ್ಮಿಕರಿಗೆ ಕೆಲಸದ ಜೊತೆಗೆ ಆರೋಗ್ಯ ಭಾಗ್ಯ


ಕಾರವಾರ: ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ವಿಶೇಷ ಕಾರ್ಯಕ್ರಮವನ್ನು ರೂಪಿಸಿ ಜನರಿಗೆ ಕೂಲಿ ಜೊತೆಗೆ ಆರೋಗ್ಯಭಾಗ್ಯ ನೀಡುತ್ತಿದೆ.

ತಾಲೂಕಿನ ದೇವಳಮಕ್ಕಿ ಹಾಗೂ ಮಾಜಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನೆಡೆಸಲಾಯ್ತು. ರಾಜ್ಯದಲ್ಲಿ ಒಟ್ಟು 25ಲಕ್ಷ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡುವ ಗುರಿ ಹೊಂದಿದ್ದು, ಜಿಲ್ಲೆಯಲ್ಲಿ 1ಲಕ್ಷ 15 ಸಾವಿರ ಕೂಲಿ ಕಾರ್ಮಿಕರಿಗೆ ತಪಾಸಣಾ ಗುರಿ ಹೊಂದಿಲಾಗಿದೆ. ಈ ಮೂಲಕ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಗ್ರಾಮೀಣ ಜನರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಇಂತಹ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ.