ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ (Womens) ಉಚಿತ ಬಸ್ ಪಾಸ್ (Free Bus Pass) ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್ಗಳಲ್ಲಿ ಸ್ತ್ರೀಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ.