NIA Raid: ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ದಕ್ಷಿಣ ಕನ್ನಡದ ನಾಲ್ವರು ವಶಕ್ಕೆ.

ಮಂಗಳೂರು: ಬಿಹಾರದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್​​ಐಎ ಅಧಿಕಾರಿಗಳ ದಾಳಿ​​ ಮಾಡಿ, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರಿನ ಕೂರ್ನಡ್ಕ, ತಾರಿಪಡ್ಪು, ಕುಂಬ್ರದ ಭಾಗದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆಂಬ ಮಾಹಿತಿ ದೊರೆತಿದೆ.