ವಿಧ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾರವಾರ; 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಇಲಾಖೆಗಳ ವತಿಯಿಂದ ಮೇಟ್ರಿಕ್‌ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್‌( ರಾಜ್ಯ ವಿದ್ಯಾರ್ಥಿ ನಿಲಯ ) ತಂತ್ರಾಂಶ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಈ ಇಲಾಖೆಗಳ ವಿದ್ಯಾರ್ಥಿ ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ಸ್‌ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶಗಳ ವಿಳಾಸ;https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್‌ 15 ಆಗಿರುತ್ತದೆ. ವಿದ್ಯಾರ್ಥಿಗಳು 2023-24 ನೇ ಸಾಲಿನಲ್ಲಿ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಲ ಪುಸ್ತಕ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.