ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು.

ಯಲ್ಲಾಪುರ:
ಮಾದಕ ವಸ್ತುಗಳು ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಜೊತೆಗೆ, ಜೀವನವನ್ನೇ ಹಾಳು ಮಾಡುತ್ತವೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.


ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ, ಎನ್ಎಸ್ಎಸ್ ಘಟಕಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಡಾ.ಸೌಮ್ಯಾ.ಕೆ.ವಿ ಉಪನ್ಯಾಸ ನೀಡಿದರು. ತಹಸೀಲ್ದಾರ ಎಂ.ಗುರುರಾಜ ಮಾತನಾಡಿದರು.
ಪ್ರಾಂಶುಪಾಲ ಡಿ.ಎಸ್.ಭಟ್ಟ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ಟ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಿ.ಜಿ.ತಾಪಸ್, ರಾಮಕೃಷ್ಣ ಗೌಡ ಇತರರಿದ್ದರು.