ದಾಂಡೇಲಿಯ ರೋಟರಿ ಶಾಲೆಯಲ್ಲಿ ಶಾಲಾ ಪ್ರಾರಂಬೋತ್ಸವ.

ದಾಂಡೇಲಿ : ನಗರದ ಪ್ರತಿಷ್ಠಿತ ರೋಟರಿ ಶಿಕ್ಷಣ ಸಂಸ್ಥೆಯ ರೋಟರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಪ್ರಾರಂಭೋತ್ಸವವೂ ಇಂದು ಬುಧವಾರ ಬೆಳಗ್ಗೆ 9:30 ಗಂಟೆಗೆ ಜರುಗಿತು.

ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಮತ್ತು ರೋಟರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅರುಣ್ ನಾಯಕ, ರೋಟರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಜಿ. ಪತ್ತಾರ್, ರೋಟರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಕಲ್ಪನಾ‌ ನಾಯ್ಕ, ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಸುನೀತಾ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು