ರಾಯಚೂರು: ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಬಾಲಕನೊಬ್ಬ ಸಾವಿಗೀಡಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ\ಶಶಿಧರ್ ಕುರೇರಾ ಅವರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ಸದ್ಯ ರೇಕಲಮರಡಿ ಹಾಗೂ ಗೊರೆಬಾಳ ಗ್ರಾಮದ ಕೇಸ್ ಬಗ್ಗೆ ಸರ್ಕಾರ ತಲೆಕೆಡಿಸಿಕೊಂಡಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ರಾಯಚೂರು ಜಿ.ಪಂ ಸಿಇಓ ಶಶಿಧರ್ ಕುರೇರ ಮಾಹಿತಿ ನೀಡಿದ್ದು ಸಿಎಂ ಸಿದ್ದರಾಮಯ್ಯ ಸೂಚನೆ ಮರೆಗೆ ತುರ್ತುಗತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಶಶಿಧರ್ ಕುರೇರ ಹಾಗೂ ರಾಯಚೂರು ಡಿಎಚ್ಓ ಡಾ.ಸುರೇಂದ್ರ ಬಾಬುರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರತಿದಿನದ ಪಿನ್ ಟು ಪಿನ್ ಅಪ್ಡೇಟ್ ಪಡೆಯುತ್ತಿದ್ದಾರೆ. ವಿಡಿಯೋ ಕಾನ್ಫರನ್ಸ್ ಮೂಲಕ ಎರಡು ಗ್ರಾಮಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ನಿನ್ನೆಯಷ್ಟೇ ಎರಡು ಕಡೆಯ ವಾಟರ್ ಸ್ಯಾಂಪಲ್ ಅನ್ ಫಿಟ್ ಬಗ್ಗೆಯೂ ಚರ್ಚೆ ನಡೆದಿದೆ. ಅನ್ಫಿಟ್ ಕುರಿತು ರಿಪೋರ್ಟ್ನಲ್ಲಿರೊ ಕಂಟೆಂಟ್ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.