ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ದಿಢೀರ್ ದಾಳಿ.! ನಿಷೇಧಿತ ಪ್ಲಾಸ್ಟಿಕ್ ವಶ

ಹೊನ್ನಾವರ: ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಅಂಗಡಿಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ನಿಷೇದಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ನಿಷೇಧದ ಹಿನ್ನೆಲೆಯಲ್ಲಿ ಪ.ಪಂ ಮುಖ್ಯಾಧಿಕಾರಿ ನಿರ್ದೇಶನದ ಅನ್ವಯ ಪಟ್ಟಣದ ಹೂ-ಹಣ್ಣಿನ ಅಂಗಡಿ, ಬೇಕರಿ, ಬಟ್ಟೆ ಅಂಗಡಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಒಟ್ಟೂ 15 ಕೆ.ಜಿ. ನಿಷೇದಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು 2000 ರೂ ದಂಡ ವಿಧಿಸಿದ್ದಾರೆ. ಇನ್ನು ಮುಂದೆ ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಅಂಗಡಿಕಾರರಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ವೆಂಕಟೇಶ ನಾಯ್ಕ, ಸಣ್ಣು ಗೊಂಡ, ಶಕುಂತಲಾ ನಾಯ್ಕ, ಯೋಗೇಶ ಹರಿಜನ, ಗಣೇಶ ಬೈಂದೂರಕರ್ ಕಾರ್ಯಚರಣೆಯಲ್ಲಿದ್ದರು.