ದೇಶದಲ್ಲಿ ಇಳಿಕೆ ಕಂಡ ಕೋವಿಡ್ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಏರಿಕೆಯಾಗಿದ್ದ ಕೋವಿಡ್ ಕೇಸ್‌ಗಳ ಸಂಖ್ಯೆ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 15,528 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 1,43,654 ಇದ್ದು 24 ಗಂಟೆಗಳಲ್ಲಿ 16,113 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 4,31,13,623 ಮಂದಿ ಗುಣಮುಖರಾಗಿ ಬಿಡುಗಡೆಹೊಂದಿದ್ದಾರೆ.