Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ


ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.
ಬೆಂಗಳೂರು: ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ (BPL And APL Card) ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಗೃಹ ಲಕ್ಷ್ಮೀ (Gruha Lakshmi Scheme) ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆ ಘೋಷಣೆ ಮಾಡಿದರು. ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಇದಕ್ಕೆ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಮನೆಯ ಯಜಮಾನಿ ಯಾರು ಎಂಬುದರ ಮಾಹಿತಿಯನ್ನೂ ಒದಗಿಸಬೇಕಾಗುತ್ತದೆ. ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2000 ವರ್ಗಾವಣೆ ಮಾಡುತ್ತೇವೆ ಎಂದು ನಾವು ಹೇಳಿದ್ದೆವು. ಹೀಗಾಗಿ ಯಜಮಾನಿಯ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.