ಹಳಿಯಾಳ : ಪಟ್ಟಣದ ತಾಲ್ಲೂಕು ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ ಹಳಿಯಾಳ ತಾಲ್ಲೂಕು ವ್ಯಾಪ್ತಿಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಶಾಸಕರಾದ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಭೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ಹಂತದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಸಂಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆರ್.ವಿ.ದೇಶಪಾಂಡೆಯವರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ, ಹಳಿಯಾಳ ತಾಲ್ಲೂಕಿನ ತಹಶೀಲ್ದಾರ್ ಲೋಕೇಶ್, ದಾಂಡೇಲಿಯ ತಹಶೀಲ್ದಾರ್ ಅಶೋಕ್ ಶಿಗ್ಗಾವಿ, ಡಿವೈಎಸ್ಪಿ ಶಿವಾನಂದ ಕಟಗಿ, ಹಳಿಯಾಳ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪರಶುರಾಮ ಗಸ್ತೆ, ದಾಂಡೇಲಿ ತಾ.ಪಂ ಕಾರ್ಯನಿರ್ವಣಾಧಿಕಾರಿ ಪ್ರಕಾಶ ಹಾಲಮನ್ನವರ, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.