ಕಾರವಾರ-ಅಂಕೋಲಾ ವಿಧಾನ ಸಭಾ ಸದಸ್ಯ ಸತೀಶ ಸೈಲ್ ಇಂದು ಅಂಕೋಲಾಕ್ಕೆ ಆಗಮಿಸಲಿದ್ದಾರೆ.
ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಆಗಮಿಸುತ್ತಿರುವ ಸೈಲ್ ಗೆ ಅಂಕೋಲಾ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರ ಪರವಾಗಿ ನಾಗರಿಕ ಸನ್ಮಾನ ಹಾಗೂ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಸುಮಾರು 2 ಸಾವಿರ ಜನ ಸೇರುವ ನಿರೀಕ್ಷೆಯಿದ್ದು ಕೂಟಕ್ಕಾಗಿ ಅಂಕೋಲೆಯ ನಾಡವರ ಸಮುದಾಯ ಭವನದಲ್ಲಿ ಎಲ್ಲಾ ತಯಾರಿಗಳು ಭರದಿಂದ ಸಾಗುತ್ತಿವೆ.