ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವ ಒಡಿಶಾ ಮೂಲದ ಕುಟುಂಬಗಳಿಗೆ 5 ಲಕ್ಷ ರೂ ನೀಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. ಹಾಗೆಯೇ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ನಿನ್ನೆಯಷ್ಟೇ ಕೇಂದ್ರ ಸರ್ಕಾರವು ಈ ರೈಲು ದುರಂತದಲ್ಲಿ ಸಾವನ್ನಪ್ಪಿರುವವರ ಎಲ್ಲಾ ಕುಟುಂಬಕ್ಕೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದೆ.

ಮೃತರ ಪ್ರತಿ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಅಶ್ವಿನಿ ವೈಷ್ಣ ಪ್ರಕಟಿಸಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳುಗೆ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ. ಅನೇಕ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.