ಲೋಕಾಯುಕ್ತ ಟ್ರ್ಯಾಪ್ ಕೇಸ್‌ನಲ್ಲಿ ಹೆಸರು – ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್ ಅಮಾನತು

ಬೆಂಗಳೂರು: ಕರ್ತವ್ಯ ಲೋಪ, ಭ್ರಷ್ಟಾಚಾರ ಆರೋಪದಡಿ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ರನ್ನ ಅಮಾನತು ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಸುಮಾ ಅಮಾನತಾದ ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್. ಇವರು ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಿವಾಜಿನಗರ ಠಾಣೆ ಪಿಎಸ್‌ಐ ಸವಿತಾ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವಾದ 5 ಸಾವಿರ ರೂ. ಪಡೆಯುತ್ತಿದ್ದಾಗ ಸಬ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತದ ಕೈಗೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಟ್ರ್ಯಾಪ್‌  ಕೇಸ್‌ನಲ್ಲಿ ಇನ್‌ಸ್ಪೆಕ್ಟರ್ ಸುಮಾ ಹೆಸರು ಕೇಳಿ ಬಂದಿತ್ತು. ಸುಮಾ ಮೇಲೆ ಹಲವು ಆರೋಪಗಳು ಕೇಳಿ ಬಂದಿದ್ದು, ಲಂಚ, ಕರ್ತವ್ಯ ಲೋಪ, ದುವರ್ತನೆ, ಎಲ್ಲಾ ಆರೋಪಗಳ ಹಿನ್ನೆಲೆ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.