ಜೋಯಿಡಾ :ಜೋಯಿಡಾ ಗ್ರಾ.ಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೊರೈಕೆಯ ದುರಸ್ತಿ ಕಾರ್ಯವನ್ನು ಪರಿಶೀಲಿಸಿದ ತಹಶೀಲ್ದಾರ್

ಜೋಯಿಡಾ : ಜೋಯಿಡಾ ತಾಲ್ಲೂಕು ಕೇಂದ್ರದ ಜೋಯಿಡಾ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೊರೈಕೆಯಲ್ಲಾಗುತ್ತಿರುವ ಸಮಸ್ಯೆಯನ್ನು ಪರಿಶೀಲಿಸಿ, ದುರಸ್ತಿ ಕಾರ್ಯವನ್ನು ಕೂಡಲೆ ಮುಗಿಸುವಂತೆ ತಹಶೀಲ್ದಾರ್ ಜುಬೀನ್ ಮಹಾಪಾತ್ರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯ್ತು ಪಿಡಿಓ ಅವರಿಗೆ ಸೂಕ್ತ ನಿರ್ದೇಶನವನ್ನು ನೀಡಿದ್ದರು. ಅದರಂತೆ ತಹಶೀಲ್ದಾರರ ನಿರ್ದೇಶನದಂತೆ ದುರಸ್ತಿ ಕಾರ್ಯವನ್ನು ಸಂಪೂರ್ಣ ಮುಗಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗಿದೆ ತಹಶೀಲ್ದಾರ್ ಜುಬೀನ್ ಮಹಾಪಾತ್ರ ಅವರು ಸ್ಥಳ ಪರಿಶೀಲನೆ ನಡೆಸಿ, ದುರಸ್ತಿ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತು ಕಾರ್ಯನಿರ್ವಹಣಾಧಿಕಾರಿ ಆನಂದ ಬಡಕುಂದ್ರಿ, ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿ, ಕಂದಾಯ ನಿರೀಕ್ಷಕರಾದ ಗಣಪತಿ ಮೇತ್ರಿ, ಗ್ರಾಮ ಪಂಚಾಯ್ತು ಪಿಡಿಓ ಮೊದಲಾದವರು ಉಪಸ್ಥಿತರಿದ್ದರು.