ದಾಂಡೇಲಿ : ದಾಂಡೇಲಿಯ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಪರವಾಗಿ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಜೈನ್ ಅವರು ಶಾಸಕರಾದ ಆರ್.ವಿ.ದೇಶಪಾಂಡೆಯವರನ್ನು ವಿಧಾನ ಸಭಾ ಚುನಾವಣೆಯಲ್ಲಿ 9 ನೇ ಬಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಕೆ.ಜಿ.ಗಿರಿರಾಜ, ರಾಜೇಶ್ ತಿವಾರಿ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಖಲೀಲ್ ಕುಲಕರ್ಣಿ, ರಾಜು ರೋಸಯ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.