ಹಳಿಯಾಳ :ಹಳಿಯಾಳದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿಂದೂ ಸಾಮ್ರಾಜ್ಯೋತ್ಸವ

ಹಳಿಯಾಳ : ಹಳಿಯಾಳ ಪಟ್ಟಣದ ಕಿಲ್ಲಾದಲ್ಲಿರುವ ಮಾರೆಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಳಿಯಾಳ ಇವರ ಆಶ್ರಯದಡಿ ಹಮ್ಮಿಕೊಳ್ಳಲಾಗಿದ್ದ ಶೋಭಾಕೃತ ಸಂವತ್ಸರ ಜೇಷ್ಟ ಮಾಸ ಶುಕ್ಲ ಪಕ್ಷ ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಸಂಘದ ಕಾರ್ಯಕರ್ತರು ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.