‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ ಕೊಲ್ಲಂ ಸುಧಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಇಂದು (ಜೂನ್ 5) ಮುಂಜಾನೆ ಈ ಅಪಘಾತ ನಡೆದಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ಮರಣವು ಕುಟುಂಬದವರಿಗೆ ಹಾಗೂ ಫ್ಯಾನ್ಸ್ಗೆ ಅತೀವ ದುಃಖ ತಂದಿದೆ.
ತ್ರಿಶೂರ್ ಸಮೀಪ ಮುಂಜಾನೆ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅವರು ವಡಕರಾದಲ್ಲಿ ಕಾರ್ಯಕ್ರಮ ಒಂದನ್ನು ಮುಗಿಸಿ ಮರಳುತ್ತಿದ್ದರು. ಆಗ ಇವರ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡ ಕೊಲ್ಲಂ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.
ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಸುಧಿ ಅವರು ಮೊದಲು ಮೃತಪಟ್ಟರು. ಉಳಿದ ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.